ನವದೆಹಲಿ: ಜನವರಿ 7ರವರೆಗೆ ದೇಶದ 12 ರಾಜ್ಯಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಜೆಎನ್.1 ಸೋಂಕಿತ 682 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.
ನವದೆಹಲಿ: ಜನವರಿ 7ರವರೆಗೆ ದೇಶದ 12 ರಾಜ್ಯಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಜೆಎನ್.1 ಸೋಂಕಿತ 682 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ 199, ಕೇರಳದಲ್ಲಿ 148, ಮಹಾರಾಷ್ಟ್ರದಲ್ಲಿ 139, ಗೋವಾದಲ್ಲಿ 47 ಗುಜರಾತ್‌ನಲ್ಲಿ 36 ಮತ್ತು ಆಂಧ್ರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ತಲಾ 30 ಪ್ರಕರಣಗಳು ವರದಿಯಾಗಿವೆ.
ದೇಶದಾದ್ಯಂತ ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಜೆಎನ್.1 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಕಳವಳಕಾರಿಯಾದ ಸನ್ನಿವೇಶವಿಲ್ಲ. ಸೋಂಕಿತರಲ್ಲಿ ಬಹುತೇಕರು ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳ, ಅದರಲ್ಲೂ ಜೆಎನ್.1 ಸೋಂಕಿತರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಗಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಪರಿಣಾಮಕಾರಿ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು ಮತ್ತು ಜಿಲ್ಲಾವಾರು ಅನಾರೋಗ್ಯ, ಉಸಿರಾಟದ ಸಮಸ್ಯೆಗೆ ತುತ್ತಾಗಿರುವವರ ಸಂಖ್ಯೆಗಳ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಸೂಚಿಸಿದೆ.
ಜೆಎನ್.1 ರೂಪಾಂತರ ತಳಿಯು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದ್ದರೂ ಸಹ ಗಂಭೀರ ಆರೋಗ್ಯ ಸಮಸ್ಯೆ ಉಂಟು ಮಾಡುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.