ವಾಜಿಮಾ: ಹೊಸ ವರ್ಷದ ಮೊದಲ ದಿನ (ಸೋಮವಾರ) ಜಪಾನ್‌ನ ಪಶ್ಚಿಮ ಭಾಗದ ಕರಾವಳಿಯಲ್ಲಿ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ವಾಜಿಮಾ: ಹೊಸ ವರ್ಷದ ಮೊದಲ ದಿನ (ಸೋಮವಾರ) ಜಪಾನ್‌ನ ಪಶ್ಚಿಮ ಭಾಗದ ಕರಾವಳಿಯಲ್ಲಿ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಭೂಕಂಪದ ತೀವ್ರತೆ ಒಂದು ಬಾರಿ ರಿಕ್ಟರ್ ಮಾಪನದಲ್ಲಿ 7.6ರಷ್ಟು ದಾಖಲಾಗಿದೆ.
ದ್ವೀಪ ಪ್ರದೇಶ ಹೊನ್ಶುವಿನ ಇಶಿಕಾವಾ ವಲಯದಲ್ಲಿ ಭೂಕಂಪದ ತೀವ್ರತೆಯು ಹೆಚ್ಚಾಗಿದೆ. ಬಹುಮಹಡಿ ಕಟ್ಟಡ ಸೇರಿದಂತೆ ಹಲವು ಮನೆಗಳು ಉರುಳಿವೆ. ಹೆಚ್ಚಿನ ರಸ್ತೆಗಳು ಬಿರುಕುಬಿಟ್ಟಿವೆ. ಅಲ್ಲಲ್ಲಿ ಬೆಂಕಿ ಅವಘಡಗಳು ವರದಿಯಾಗಿದ್ದವು.
ಇದುವರೆಗೆ 100 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಆದರೆ, ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಶೋಧ ಕಾರ್ಯ ಚುರುಕಿನಿಂದ ಸಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.