HEALTH TIPS

ಜ.12ರಂದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

              ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಕೆಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇನ್ನು ಕೆಲವು ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಧಾನಿ ಅವರ ಕಾರ್ಯಕ್ರಮಗಳು, ಬಿಜೆಪಿ-ಶಿವಸೇನಾ-ಎನ್‌ಸಿಪಿ ಮೈತ್ರಿಕೂಟದ ಲೋಕಸಭಾ ಚುನಾವಣಾ ಪ್ರಚಾರದ ಆರಂಭ ಎಂದೂ ಬಿಂಬಿತವಾಗಿವೆ.

            ಬಿಜೆಪಿ-ಶಿವಸೇನಾ-ಎನ್‌ಸಿಪಿ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಂತಿಮ ಮಾತುಕತೆಯನ್ನು ಆರಂಭಿಸಿದೆ. ಜನವರಿ 12 ಸ್ವಾಮಿ ವಿವೇಕಾನಂದ ಅವರ ಜನ್ಮದಿನವೂ ಹೌದು. ಮೋದಿ ಅವರು ಐದು ದಿನಗಳ ರಾಷ್ಟ್ರೀಯ ಯುವ ಉತ್ಸವವನ್ನು ನಾಸಿಕ್‌ನಲ್ಲಿ ಉದ್ಘಾಟಿಸಲಿದ್ದಾರೆ. ನವಿ ಮುಂಬೈನಲ್ಲಿ ನಡೆಯುವ ಒಂದು ಕಾರ್ಯಕ್ರಮದಲ್ಲಿ ಮೇಲ್ಸೇತುವೆಯೊಂದನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿಸಲಿದ್ದಾರೆ.

                   ಪ್ರಧಾನಿಯವರ ಕಾರ್ಯಕ್ರಮವು ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಹಲವು ಸಭೆಗಳನ್ನು ನಡೆಸಿದ್ದಾರೆ. ಮಹಾ ಯುತಿ ಮೈತ್ರಿಕೂಟದಲ್ಲಿ ಬಿಜೆಪಿ, ಶಿವಸೇನಾದ ಏಕನಾಥ ಶಿಂದೆ ಬಣ, ಎನ್‌ಸಿಪಿಯ ಅಜಿತ್ ಪವಾರ್ ಬಣ ಮಾತ್ರವೇ ಅಲ್ಲದೆ, ರಾಮದಾಸ್ ಅಥಾವಳೆ ನೇತೃತ್ವದ ಆರ್‌ಪಿಐ, ಹಿತೇಂದ್ರ ಠಾಕೂರ್ ನೇತೃತ್ವದ ಬಹುಜನ ವಿಕಾಸ್ ಅಘಾಡಿ, ಬಚ್ಚು ಕಡು ನೇತೃತ್ವದ ಪ್ರಹಾರ್ ಜನಶಕ್ತಿ ಪಾರ್ಟಿ ಸೇರಿದಂತೆ ಕೆಲವು ಪಕ್ಷಗಳು ಇವೆ.

             2014ರ ಲೋಕಸಭಾ ಚುನಾವಣೆಯಲ್ಲಿ 24 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 23ರಲ್ಲಿ ಗೆಲುವು ಸಾಧಿಸಿತ್ತು. ಶಿವಸೇನಾ 20 ಸ್ಥಾನಗಳಲ್ಲಿ ಸ್ಪರ್ಧಿಸಿ 18 ಸ್ಥಾನ ಗೆದ್ದುಕೊಂಡಿತ್ತು. ಕಾಂಗ್ರೆಸ್ ಪಕ್ಷವು 22 ಕಡೆ ಸ್ಪರ್ಧಿಸಿತ್ತಾದರೂ, ಗೆಲುವು ಕಂಡಿದ್ದು 2 ಸ್ಥಾನಗಳಲ್ಲಿ ಮಾತ್ರ. ಎನ್‌ಸಿಪಿ ಪಕ್ಷವು 21 ಸ್ಥಾನಗಳಲ್ಲಿ ಸ್ಪರ್ಧಿಸಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿತ್ತು.

               2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧಿಸಿ, 23 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನಾ 23 ಕಡೆ ಸ್ಪರ್ಧಿಸಿತ್ತು, 18 ಸ್ಥಾನಗಳನ್ನು ಗೆದ್ದುಕೊಂಡಿತ್ತು. 25 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿತ್ತು. ಎನ್‌ಸಿಪಿ 19 ಸ್ಥಾನಗಳಲ್ಲಿ ಸ್ಪರ್ಧಿಸಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿತ್ತು.

                ಆದರೆ 2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರದಲ್ಲಿ ಈ ರಾಜ್ಯದ ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆಗಳು ಆಗಿವೆ. ಶಿವಸೇನಾ ಪಕ್ಷವು ಹೋಳಾಗಿದೆ. ಎನ್‌ಸಿಪಿ ಕೂಡ ಎರಡು ಬಣಗಳಾಗಿ ಒಡೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries