ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗಿರುವುದರಿಂದ ಪ್ರಾಥಮಿಕ ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗಿರುವುದರಿಂದ ಪ್ರಾಥಮಿಕ ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ.
5ನೇ ತರಗತಿವರೆಗೆ ಚಳಿಗಾಲದ ರಜೆಯನ್ನು ಜನವರಿ 12ರವರೆಗೆ ವಿಸ್ತರಿಸಲಾಗಿದೆ ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಹೇಳಿದ್ದಾರೆ.
ಜ.8ರಿಂದ (ಸೋಮವಾರ) ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗಿರುವುದರಿಂದ ರಜೆಯನ್ನು ವಿಸ್ತರಿಸಲಾಗಿದೆ.
ದೆಹಲಿ ನಗರದಾದ್ಯಂತ ಮುಂದಿನ ಕೆಲವು ದಿನಗಳವರೆಗೆ ದಟ್ಟವಾದ ಮಂಜು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.