ನವದೆಹಲಿ: ಸೊಮಾಲಿಯಾ ಕರಾವಳಿಯ ಬಳಿ 15 ಮಂದಿ ಭಾರತೀಯ ಸಿಬ್ಬಂದಿ ಇದ್ದ ಹಡಗನ್ನು ಅಪಹರಿಸಲಾಗಿದೆ ಎಂದು ವರದಿಯಾಗಿದೆ.
ನವದೆಹಲಿ: ಸೊಮಾಲಿಯಾ ಕರಾವಳಿಯ ಬಳಿ 15 ಮಂದಿ ಭಾರತೀಯ ಸಿಬ್ಬಂದಿ ಇದ್ದ ಹಡಗನ್ನು ಅಪಹರಿಸಲಾಗಿದೆ ಎಂದು ವರದಿಯಾಗಿದೆ.
ಭಾರತೀಯ ನೌಕಾಪಡೆಯ ಯುದ್ಧನೌಕೆ 'ಐಎನ್‌ಎಸ್' ಚೆನ್ನೈ, ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಅಪಹರಣಕ್ಕೊಳಗಾದ ಹಡಗಿನ ಮೇಲೆ ನಿಗಾ ಇರಿಸಲಾಗಿದ್ದು, ಭಾರತೀಯ ಸಿಬ್ಬಂದಿಯೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.