ಕಾಸರಗೋಡು: ನೋಂದಣಿ ಇಲಾಖೆ ಡಿಜಿಟಲೀಕರಣ ಯೋಜನೆಯ ಉದ್ಘಾಟನೆ ಜನವರಿ 15ರಂದು ಮಧ್ಯಾಹ್ನ 12ಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಲಿದೆ. ನೋಂದಣಿ, ವಸ್ತು ಸಂಗ್ರಹಾಲಯ ಮತ್ತು ಪ್ರಾಚ್ಯವಸ್ತು ಖಾತೆ ಸಚಿವ ಕಡನ್ನಪಳ್ಳಿ ರಾಮಚಂದ್ರನ್ ಉದ್ಘಾಟಿಸುವರು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಪ್ರಧಾನ ಭಾಷಣ ಮಾಡುವರು. ಶಾಸಕ ಎನ್.ಎ.ನೆಲ್ಲಿಕುನ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎಂ.ರಾಜಗೋಪಾಲನ್, ಇ.ಚಂದ್ರಶೇಖರನ್, ವಕೀಲ ಸಿ.ಎಚ್.ಕುಞಂಬು, ಎಕೆಎಂ.ಅಶ್ರಫ್ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.