ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಸಂತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಸೋಮವಾರ ಜರಗಿತು. ಶಾಲಾ ಸಂಚಾಲಕ ಜಯಪ್ರಕಾಶ ಪಜಿಲ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. , ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಕಂಡೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ರಾಜಗೋಪಾಲ ಚುಳ್ಳಿಕ್ಕಾನ, ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ವಿದ್ಯಾರ್ಥಿಗಳ ಪಾಲಕರು, ಅಧ್ಯಾಪಕ ವೃಂದ, ಶಾಲಾ ಹಿತೈಷಿಗಳು ಪಾಲ್ಗೊಂಡಿದ್ದರು. ಜ.19 ಅಪರಾಹ್ನ ಮೂರು ಗಂಟೆಯಿಂದ ಸಭಾಕಾರ್ಯಕ್ರಮ, ಮಕ್ಕಳಿಂದ ರಾಮಾಯಣ ಕಥಾನಕ ಆಧರಿಸಿ ಭರತನಾಟ್ಯ, ನೃತ್ಯರೂಪಕ, ನಾಟಕ, ಯಕ್ಷಗಾನ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ.