ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಾಕಡೋನ್ ಪಟ್ಟಣದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮಧ್ಯಪ್ರದೇಶ ಗಲಭೆ: ವಲ್ಲಭಭಾಯಿ ಪಟೇಲ್ ಪ್ರತಿಮೆ ಧ್ವಂಸ: 19 ಮಂದಿ ಬಂಧನ
0
ಜನವರಿ 28, 2024
Tags
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಾಕಡೋನ್ ಪಟ್ಟಣದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು ದುಷ್ಕರ್ಮಿಗಳು ಗುರುವಾರ ಧ್ವಂಸಗೊಳಿಸಿದ್ದರು.
ಗಲಭೆ ಎಬ್ಬಿಸಿದ ಮತ್ತು ಸಾರ್ವಜನಿಕ ಸೇವೆಯಲ್ಲಿರುವ ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮಾಕಡೋನ್‌ನಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ. ಸದ್ಯ ಪರಿಸ್ಥಿತಿ ತಿಳಿಗೊಂಡಿದ್ದು, ಇಲ್ಲಿಯ ಮಾರುಕಟ್ಟೆಗಳನ್ನು ತೆರೆಯಲಾಗಿದೆ. ಪೊಲೀಸರು ಪರಿಸ್ಥಿತಿ ಕುರಿತು ನಿಗಾವಹಿಸಿದ್ದಾರೆ. ಗಲಭೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಗುಂಪೊಂದು ಟ್ರ್ಯಾಕ್ಟರ್ ಬಳಿಸಿ ಪಟೇಲ್ ಪ್ರತಿಮೆಯನ್ನು ನೆಲಕ್ಕುರುಳಿಸಲು ಪ್ರಯತ್ನಿಸುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಬಳಿಕ ಎರಡು ಸಮುದಾಯದ ನಡುವೆ ಗಲಭೆ ಭುಗಿಲೆದ್ದಿತ್ತು. ಆ ಪ್ರತಿಮೆಯಿದ್ದ ಜಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಿಸಬೇಕು ಎಂದು ಆಗ್ರಹಿಸಿ, ಪಟೇಲ್ ಪ್ರತಿಮೆಯನ್ನು ಧ್ವಂಸಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.