ತೆಹರಾನ್: ಇರಾನ್ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಜನರನ್ನು ಗುರಿಯಾಗಿರಿಸಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ತೆಹರಾನ್: ಇರಾನ್ ಸೇನಾಧಿಕಾರಿಯಾಗಿದ್ದ ಖಾಸಿಂ ಸುಲೇಮಾನಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಜನರನ್ನು ಗುರಿಯಾಗಿರಿಸಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕೋರ್‌ನ ಕಮಾಂಡರ್ ಮೇಜರ್ ಜನರಲ್ ಆಗಿದ್ದ ಖಾಸಿಂ ಸುಲೇಮಾನಿ ಅವರು ಅಮೆರಿಕ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದರು. ಬಾಗ್ದಾದ್ ವಿಮಾನ ನಿಲ್ದಾಣದ ಹೊರಭಾಗದಲ್ಲಿ 2020ರ ಜನವರಿ 3ರಂದು ಈ ದಾಳಿ ಸಂಘಟಿಸಿತ್ತು.
ಖಾಸಿಂ ಅವರ ಹತ್ಯೆಗೆ ಪ್ರತಿಕಾರವಾಗಿ ಅಮೆರಿಕದ ಆಗಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಲ್ಲುವುದಾಗಿ ಇರಾನ್ ಎಚ್ಚರಿಕೆ ನೀಡಿತ್ತು.