ಮುಳ್ಳೇರಿಯ: ಬೆಳ್ಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ವಿಚಾರ ಸಂಕಿರಣ ನಿನ್ನೆ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಎನ್.ಎ ನೆಲ್ಲಿಕ್ಕುನ್ನು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬೆಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಎಂ ಬೆಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಅವರು 2024-25 ರ ವಾರ್ಷಿಕ ಕರಡು ಯೋಜನಾ ದಾಖಲೆಯನ್ನು ಮಂಡಿಸಿದರು, ಬ್ಲಾಕ್ ಪಂಚಾಯತಿ ಸದಸ್ಯೆ ಯಶೋಧಾ, ಯೋಜನಾ ಸಮಿತಿ ಉಪಾಧ್ಯಕ್ಷ ಸುಕುಮಾರನ್, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಜಯಕುಮಾರ್, ಕ್ಷೇಮ ಕಾರ್ಯ ಸ್ಥಾಯಿಸಮಿತಿ ಅಧ್ಯಕ್ಷೆ ಸುಜಾತಾ ಎಂ ರೈ, ಸದಸ್ಯರಾದ ಶ್ರೀಪತಿ ಶುಭ ಹಾರೈಸಿದರು. ಪಂಚಾಯತಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿಗಳು, ಉದ್ಯೋಗಸ್ಥರು, ಹಸಿರು ಕ್ರಿಯಾಸೇನೆ ಸದಸ್ಯರು, ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಭಾಗವಹಿಸಿದ್ದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ ಕೆ ಕಾರ್ಯಕ್ರಮ ಸ್ವಾಗತಿಸಿ, ಕಾರ್ಯದರ್ಶಿ ಗೀತಾ ಕುಮಾರಿ ವಂದಿಸಿದರು.