ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಭಾನುವಾರ) ಬೆಳಿಗ್ಗೆ ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಭಾನುವಾರ) ಬೆಳಿಗ್ಗೆ ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರನ್‌ವೇ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದರಿಂದ ಏಳು ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
ನಸುಕಿನ 4.30ರಿಂದ ಬೆಳಿಗ್ಗೆ 7.30ರವರೆಗೆ ಆರು ವಿಮಾನಗಳನ್ನು ಜೈಪುರಕ್ಕೆ ಮತ್ತೊಂದು ವಿಮಾನವನ್ನು ಮುಂಬೈಗೆ ಮಾರ್ಗ ಬದಲಾವಣೆ ಮಾಡಿ ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದಟ್ಟ ಮಂಜಿನಿಂದಾಗಿ ಹಲವೆಡೆ 'ಶೂನ್ಯ ಗೋಚರತೆ' ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮತ್ತು ಅನಗತ್ಯ ಪ್ರಯಾಣ ಮಾಡದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.