HEALTH TIPS

75ನೇ ಗಣರಾಜ್ಯೋತ್ಸವ: ವಿಶೇಷ ಡೂಡಲ್‌ ಮೂಲಕ ಶುಭ ಕೋರಿದ ಗೂಗಲ್‌

             ನವದೆಹಲಿ: ದೇಶದಾದ್ಯತ 75ನೇ ಗಣರಾಜ್ಯೋತ್ಸ ಸಂಭ್ರಮ ಮನೆ ಮಾಡಿದ್ದು, ಈ ನಡುವಲ್ಲೇ ವಿಶೇಷ ಡೂಡಲ್‌ ಮೂಲಕ ಗೂಗಲ್ ಶುಭ ಕೋರಿದೆ.

              ಅನಲಾಗ್ ಟಿವಿಗಳ ಯುಗದಿಂದ ಸ್ಮಾರ್ಟ್‌ಫೋನ್‌ಗಳ ಬಳಕೆಯವರೆಗೆ ದೇಶ ಪರಿವರ್ತನೆಯಾದ ಕಾಲಘಟ್ಟದ ಬಗ್ಗೆ ಗೂಗಲ್ ಹಂಚಿಕೊಂಡಿದೆ.

            ಕಾಲ ಕಳೆದಂತೆ ಕಪ್ಪು–ಬಿಳಿಯ ಟಿವಿ ಪರದೆಗಳು ಬಣ್ಣದ ಟಿವಿಗಳಾಗಿವೆ. ಅದರ ನೋಡುಗರು ಮಾತ್ರ ಅದೇ ಹೆಮ್ಮೆಯಿಂದ ವೀಕ್ಷಿಸುತ್ತಿದ್ದಾರೆ ಎಂದು ಗೂಗಲ್‌ ಬರೆದುಕೊಂಡಿದೆ.

                ಈ ಡೂಡಲ್ ಭಾರತದ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ, ಇದು 1950 ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ನೆನಪಿಸುತ್ತದೆ ಮತ್ತು ರಾಷ್ಟ್ರವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿದ ದಿನ’ ಎನ್ನುವ ಮಾಹಿತಿಯನ್ನು ಡೂಡಲ್‌ನಲ್ಲಿ ವಿವರಿಸಿದೆ.

            ಇದರೊಂದಿಗೆ ಗೂಗಲ್‌ ಐತಿಹಾಸಿಕ ದಿನ ಮಹತ್ವ ಹಾಗೂ ಈ ಡೂಡಲ್‌ ರಚಿಸಿದ ಕಲಾವಿದರ ಬಗ್ಗೆಯೂ ವಿವರಿಸಿದೆ.

             ಕಳೆದ ವರ್ಷ ಕೂಡ ಗೂಗಲ್‌ ಡೂಡಲ್‌ ರಚಿಸುವ ಮೂಲಕ ಭಾರತದ ಗಣರಾಜೋತ್ಸವವನ್ನು ಸಂಭ್ರಮಿಸಿತ್ತು. ರಾಷ್ಟ್ರಪತಿ ಭವನ, ಇಂಡಿಯಾ ಗೇಟ್‌, ಪರೇಡ್‌ನ ದ್ರಶ್ಯವನ್ನು ಡೂಡಲ್‌ನಲ್ಲಿ ಸೇರಿಸಲಾಗಿತ್ತು.

              ಗೂಗಲ್‌ ಡೂಡಲ್‌ ಇಂತಹ ವಿಶೇಷ ಸಂದರ್ಭದಲ್ಲಿ ಗೌರವ ಸಲ್ಲಿಸುವ ಉದ್ದೇಶದಿಂದ ಡೂಡಲ್‌ಗಳನ್ನು ರಚಿಸಿ ಪ್ರಕಟಿಸುತ್ತದೆ. ಇದು ಪ್ರಮುಖ ದಿನಗಳು, ಹಬ್ಬಗಳು ಮತ್ತು ಪ್ರಸಿದ್ಧ ಕಲಾವಿದರು, ಪ್ರವರ್ತಕರು ಮತ್ತು ವಿಜ್ಞಾನಿಗಳ ಜೀವನವನ್ನು ಸ್ಮರಿಸುವ ಗುರಿಯನ್ನು ಹೊಂದಿದೆ.

               ಈ ಬಾರಿ ಭಾರತದಲ್ಲಿ ನಡೆಯುತ್ತಿರುವ 75ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ಮಾಡಲಿದ್ದಾರೆ. ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries