ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 760 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,423ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 760 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,423ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
24 ಗಂಟೆಗಳ ಅವಧಿಯಲ್ಲಿ ಕೇರಳ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಡಿಸೆಂಬರ್ 5ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿತ್ತು. ಆದರೆ,ಕೊರೊನಾದ ಹೊಸ ರೂಪಾಂತರ ಮತ್ತು ಶೀತ ಹವಾಮಾನದ ಹಿನ್ನೆಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಿವೆ.
2020ರ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ಸಾಂಕ್ರಾಮಿಕದ ಉತ್ತುಂಗದಲ್ಲಿ ದಿನಕ್ಕೆ ಲಕ್ಷಗಳಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದವು. ನಾಲ್ಕು ವರ್ಷಗಳಲ್ಲಿ ದೇಶದಾದ್ಯಂತ 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. 5.3 ಲಕ್ಷಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಸಚಿವಾಲಯದ ವೆಬ್‌ಸೈಟ್ ಪ್ರಕಾರ, 4 ವರ್ಷಗಳಲ್ಲಿ ಕೋವಿಡ್‌ನಿಂದ 4.4 ಕೋಟಿಗೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಚೇತರಿಕೆ ದರ ಶೇ 98.81ರಷ್ಟಿದೆ.
ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.