ಪಾಟ್ನಾ: ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರು 9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಬಿಹಾರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಆರ್ ಜೆಡಿ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿತೀಶ್ ಇದೀಗ ಮಹಾಘಟಬಂಧನ್ ನಿಂದ ಹೊರಬಂದಿದ್ದು ಇದೀಗ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ. ನಿತೀಶ್ ಕುಮಾರ್ ಪ್ರಮಾಣ ವಚನದ ವೇಳೆ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ನಂತರ ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಹಾಗೂ ಸಾಮ್ರಾಟ್ ಚೌಧರಿ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಹಾರದ ಇಂದು ರಾಜಕೀಯದಲ್ಲಿ ಹೊಸ ಬದಲಾವಣೆಯಾಗಿದೆ. ಬೆಳಗ್ಗೆ 11 ಗಂಟೆಗೆ ರಾಜಭವನಕ್ಕೆ ಆಗಮಿಸಿದ ಸಿಎಂ ನಿತೀಶ್ ಕುಮಾರ್ ಮಹಾಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದರು. ಇದಾದ ಬಳಿಕ ಮತ್ತೆ ಮಧ್ಯಾಹ್ನ 1 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ನಿತೀಶ್ ಕುಮಾರ್ ಹೇಳಿದ್ದರು.