ಥಾಣೆ: ಮಹಾರಾಷ್ಟ್ರದ ಥಾಣೆ ನಗರದ ಕ್ರೀಕ್‌ನ ಬಳಿ ಭಾನುವಾರ ಮುಂಜಾನೆ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಕನಿಷ್ಠ 95 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಥಾಣೆ: ಮಹಾರಾಷ್ಟ್ರದ ಥಾಣೆ ನಗರದ ಕ್ರೀಕ್‌ನ ಬಳಿ ಭಾನುವಾರ ಮುಂಜಾನೆ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಕನಿಷ್ಠ 95 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ರೈಂ ಬ್ರಾಂಚ್ ಯುನಿಟ್ ವಿ-ವಾಗ್ಲೆ ಎಸ್ಟೇಟ್ ಮತ್ತು ಯುನಿಟ್ II ಭಿವಂಡಿಯ ಅಧಿಕಾರಿಗಳು ವಡವಲಿ ಕ್ರೀಕ್ ಬಳಿಯ ಪ್ರದೇಶದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ.
ಸೈಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಕನಿಷ್ಠ 95 ಜನರನ್ನು ವಶಕ್ಕೆ ಪಡೆಯಲಾಗಿದೆ. ಅವರಲ್ಲಿ ಐವರು ಮಹಿಳೆಯರು ಸೇರಿದ್ದಾರೆ. ಜತೆಗೆ ಪಾರ್ಟಿ ಆಯೋಜಿಸಿದ್ದ ತೇಜಸ್ ಕುಬಾಲ್ (23) ಮತ್ತು ಸುಜಲ್ ಮಹಾಜನ್ (19) ಅವರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ) ಶಿವರಾಜ್ ಪಾಟೀಲ್ ಹೇಳಿದರು.
ದಾಳಿಯ ವೇಳೆ 70 ಗ್ರಾಂ ಚರಸ್, 0.41 ಗ್ರಾಂ ಎಲ್‌ಎಸ್‌ಡಿ, 2.10 ಗ್ರಾಂ ಎಕ್ಸ್‌ಟಸಿ ಮಾತ್ರೆಗಳು ಹಾಗೂ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹8 ಲಕ್ಷ ಎಂದು ಅಂದಾಜಿಸಲಾಗಿದೆ. ಜತೆಗೆ 21 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.