ನವದೆಹಲಿ: ಇಲ್ಲಿನ ಬಹುಮಹಡಿ ಕಟ್ಟಡದ ನೆಲಮಹಡಿಯಲ್ಲಿದ್ದ ಮನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ದೆಹಲಿಯಲ್ಲಿ ಅಗ್ನಿ ದುರಂತ: 9 ತಿಂಗಳ ಮಗು ಸೇರಿ ನಾಲ್ವರು ಸಾವು
0
ಜನವರಿ 27, 2024
Tags
ನವದೆಹಲಿ: ಇಲ್ಲಿನ ಬಹುಮಹಡಿ ಕಟ್ಟಡದ ನೆಲಮಹಡಿಯಲ್ಲಿದ್ದ ಮನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಶುಕ್ರವಾರ ಸಂಜೆ ಶಹಾದಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನೆಲಮಹಡಿಯ ಮನೆಯೊಂದರಲ್ಲಿ ಮಗು ಸೇರಿದಂತೆ 7 ಜನರು ವಾಸವಾಗಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆಯಲ್ಲಿ ಮಗು ಸೇರಿ ನಾಲ್ಕು ಜನರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಬೆಂಕಿ ಯಾವ ಕಾರಣಕ್ಕೆ ಕಾಣಿಸಿಕೊಂಡಿದೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ ಮನೆಯಲ್ಲಿದ್ದ ರಬ್ಬರ್ ವಸ್ತುಗಳು, ರಬ್ಬರ್ ಕತ್ತರಿಸುವ ಯಂತ್ರಗಳು ಬೆಂಕಿಗೆ ಆಹುತಿಯಾಗಿವೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.