ವಾರಾಣಸಿ: ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿ ಜಾಗದಲ್ಲಿ ಭಾರತೀಯ ಪುರಾತತ್ವ ಇಲಾಖೆ (ASI) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ವಾರಾಣಸಿ ನ್ಯಾಯಲಯವು ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಬುಧವಾರ ನೀಡಿದೆ.

ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿ, ದೇವಾಲಯ ಮೂಲ ತಳಪಾಯದ ಮೇಲೆ 17ನೇ ಶತಮಾನದಲ್ಲಿ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ಪುರಸ್ಕರಿಸಿದ್ದ ವಾರಾಣಸಿ ನ್ಯಾಯಾಲಯ, ಜಾಗದ ವೈಜ್ಞಾನಿಕ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚಿಸಿತ್ತು.
ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಸಂಕೀರ್ಣ ಇರುವ ಜಾಗದ ವೈಜ್ಞಾನಿಕ ಸಮೀಕ್ಷೆ ನಡೆಸಿದ ASI, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಡಿ. 18ರಂದು ಸಲ್ಲಿಸಿತ್ತು. ಆದರೆ ಇದನ್ನು 4 ವಾರಗಳ ಕಾಲ ಬಹಿರಂಗಪಡಿಸದಂತೆ ASI ನ್ಯಾಯಾಲಯವನ್ನು ಕೋರಿತ್ತು.
ಪ್ರಕರಣದ ಉಭಯ ಪಕ್ಷಗಾರರಿಗೆ ವರದಿಯ ಪ್ರತಿಯನ್ನು ನ್ಯಾಯಾಲಯವು ಬುಧವಾರ ನೀಡಿದೆ. ಜತೆಗೆ ಇದನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವಂತೆ ಹಾಗೂ ಬಹಿರಂಗಗೊಳಿಸದಂತೆ ಸೂಚಿಸಿದೆ.
ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಈ ಆದೇಶ ಪ್ರಕಟಿಸಿದ್ದಾರೆ. ವರದಿಯನ್ನು ಬಹಿರಂಗಗೊಳಿಸದಂತೆ ಆದೇಶಿಸಬೇಕು ಎಂದು ಮುಸ್ಲಿಂ ಪರ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.