ಅಯೋಧ್ಯೆ : ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಭಾಗವಾಗಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉತ್ತರ ಪ್ರದೇಶದ ಸರ್ಕಾರ ಆಯೋಜಿಸಿದೆ.
ಅಯೋಧ್ಯೆ : ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಭಾಗವಾಗಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉತ್ತರ ಪ್ರದೇಶದ ಸರ್ಕಾರ ಆಯೋಜಿಸಿದೆ.
ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು (ADA) ಗಾಳಿಪಟ ಉತ್ಸವಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪ್ರಾರಂಭಿಸಿದೆ.
ಈ ಗಾಳಿಪಟ ಉತ್ಸವದ ಮೂಲಕ ದೇಶ ಹಾಗೂ ಪ್ರಪಂಚದಾದ್ಯಂತ ಇರುವ ಪ್ರಸಿದ್ಧ ಗಾಳಿಪಟ ಹಾರಿಸುವವರಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುವ ಉದ್ದೇಶ ಹೊಂದಿದೆ ಎಂದು ಹೇಳಿದೆ.
ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲು ದೇಶ-ವಿದೇಶಗಳಲ್ಲಿ ನಡೆಯುವ ಗಾಳಿಪಟ ಉತ್ಸವಗಳಿಂದ ಪ್ರೇರಣೆ ಪಡೆಯಲಾಗಿದೆ ಎಂದಿದೆ.
ಕಾರ್ಯಕ್ರಮದ ರೂಪುರೇಷೆ ಹಾಗೂ ಮೇಲ್ವಿಚಾರಣೆಗಾಗಿ ಖಾಸಗಿ ಏಜೆನ್ಸಿಯನ್ನು ನೇಮಿಸಲು ಎಡಿಎ ಅರ್ಜಿಗಳನ್ನು ಆಹ್ವಾನಿಸಿದೆ. ಜನವರಿ 8ರೊಳಗೆ ಏಜೆನ್ಸಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದೆ.
ಕಾರ್ಯಕ್ರಮದಲ್ಲಿ 50 ಆಸನಗಳು ವಿಶೇಷ ಆಹ್ವಾನಿತರಿಗಾಗಿ ಹಾಗೂ ಇತರೆ 750 ಆಸನಗಳ ವ್ಯವಸ್ಥೆ ಮಾಡಲಾಗುವುದು. ಸಿರಿಧಾನ್ಯಗಳಿಂದ ಸಿದ್ಧಪಡಿಸಿದ ಖಾದ್ಯ ಸೇರಿದಂತೆ ವಿಶೇಷ ಭೋಜನ ವ್ಯವಸ್ಥೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.