ನವದೆಹಲಿ: ಸಂಸತ್ ಅಂಗೀಕರಿಸಿರುವ ಮಸೂದೆಗೆ ಕಾಯ್ದೆ ರೂಪ ನೀಡಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನವದೆಹಲಿ: ಸಂಸತ್ ಅಂಗೀಕರಿಸಿರುವ ಮಸೂದೆಗೆ ಕಾಯ್ದೆ ರೂಪ ನೀಡಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಹಣಕಾಸು ನಷ್ಟ ಹಾಗೂ ದಿವಾಳಿ ಸಂಹಿತೆ ಕುರಿತ ಕಾಯ್ದೆ ಜಾರಿಗೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸೀಮಾ ಬಿ.ಖಯ್ಯುಮ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತ ಅರ್ಜಿಯನ್ನು (ಪಿಐಎಲ್) ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.