ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ಸಮೀಪದ ಪಡ್ರೆ ನಿವಾಸಿ, ಬಾಲಕೃಷ್ಣ ಪಡ್ರೆ ಇವರು ಭಾರತೀಯ ಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ್ದಾರೆ. ಈ ಹಿಂದೆ ಇವರು ಅರೆಸೇನಾ ಪಡೆಯ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸಕ್ತ ಮೇಜರ್ ಆಗಿ ನಿಯುಕ್ತಿಗೊಂಡಿದ್ದಾರೆ. ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಪ್ರಾಥಮಿಕ-ಪ್ರೌಢ ಶಿಕ್ಷಣ ಪಡೆದಿರುವ ಇವರು, ದೀರ್ಘ ಕಾಲದಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.