ನವದೆಹಲಿ: ಕೇರಳ ಸೇರಿದಂತೆ ರಾಜ್ಯಗಳ ಪೆÇಳ್ಳು ಭರವಸೆಗಳ ವಿರುದ್ಧ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ವಿಧಾನಸಭೆ ಚುನಾವಣೆ, ಬಜೆಟ್ ಸೇರಿದಂತೆ ಆರ್ಥಿಕ ಪರಿಸ್ಥಿತಿಯನ್ನು ಮರೆಮಾಚಿ ಭರವಸೆಗಳನ್ನು ನೀಡುವ ಪರಿಪಾಠ ಕಂಡುಬರುತ್ತಿದೆ. ಘೋಷಣೆ ಮಾಡುವಾಗ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಬೇಕು, ಇಲ್ಲದಿದ್ದರೆ ರಾಜ್ಯಗಳು ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕುತ್ತವೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ಉದಾಹರಣೆ ಎಂದು ಎಚ್ಚರಿಕೆ ನೀಡಲಾಗಿದೆ.
ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಮತ್ತು ಸಾಲವನ್ನು ಕಡಿಮೆ ಮಾಡಲು ರಾಜ್ಯಗಳಿಗೆ ನಿರ್ದೇಶಿಸಲಾಗಿದೆ. ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ ಸಭೆಯಲ್ಲಿ ಕೇಂದ್ರವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.