ಈ ಕಾರ್ಯಕ್ರಮಕ್ಕೆ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ.
ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ತನ್ನ ನಿರ್ಧಾರವನ್ನು ಎಲ್ಲರಿಗೂ ಸೂಕ್ತ ಸಮಯದಲ್ಲಿ ತಿಳಿಸಲಾಗುವುದು ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ಪಕ್ಷದ ಈ ಇಬ್ಬರು ನಾಯಕರಲ್ಲದೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಕಳುಹಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, 'ನನಗೆ ಆಹ್ವಾನ ಬಂದಿದೆ. ಪ್ರಧಾನ ಮಂತ್ರಿ (ನರೇಂದ್ರ) ಮೋದಿಯವರ ಮಾಜಿ ಪ್ರಧಾನ ಕಾರ್ಯದರ್ಶಿ (ದೇವಸ್ಥಾನ) ಟ್ರಸ್ಟ್'ನ ಕಾರ್ಯದರ್ಶಿ ಜೊತೆಗೆ ನನ್ನ ಬಳಿಗೆ ಬಂದರು. ನನ್ನನ್ನು ಆಹ್ವಾನಿಸಲಾಗಿದೆ ಆದ್ದರಿಂದ ನಾನು ಶೀಘ್ರದಲ್ಲೇ ಈ ಬಗ್ಗೆ ನಿರ್ಧರಿಸುತ್ತೇನೆ" ಎಂದಿದ್ದಾರೆ.
ರಾಮ ಮಂದಿರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನದ ಕುರಿತು ಕಾಂಗ್ರೆಸ್ ಮುಖ್ಯಮಂತ್ರಿಯೊಬ್ಬರು ಪ್ರತಿಕ್ರಿಯಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಇದು ವೈಯಕ್ತಿಕ ನಂಬಿಕೆಗೆ ಸಂಬಂಧಿಸಿದ್ದು, ಆಹ್ವಾನವಿದ್ದರೆ ನೀವು ಹೋಗಬಹುದು ಎಂದಿದ್ದಾರೆ.
ಜನವರಿ 22 ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಜನವರಿ 22 ರಂದು ಅಯೋಧ್ಯೆಯ ಇತಿಹಾಸದಲ್ಲಿ ಹೊಸ ಅಧ್ಯಾಯ ಸೇರ್ಪಡೆಯಾಗಲಿದೆ. ಭವ್ಯ ಮಂದಿರದಲ್ಲಿ ರಾಮಲಾಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ಅಯೋಧ್ಯೆ ಸೇರಿದಂತೆ ಇಡೀ ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 500 ವರ್ಷಗಳ ಕಾಯುವಿಕೆಯ ನಂತರ, ರಾಮ್ ಲಲ್ಲಾ ತನ್ನ ಭವ್ಯವಾದ ದೇವಾಲಯದಲ್ಲಿ ಆಸೀನರಾಗಲಿದ್ದಾನೆ.