ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಇಸ್ಲಾಮಾಬಾದ್‌ನಲ್ಲಿರುವ ಯುಕೆ ಹೈ ಕಮಿಷನರ್ ಹಾಗೂ ಮತ್ತೋರ್ವ ಬ್ರಿಟಿಷ್ ಅಧಿಕಾರಿಯ ಭೇಟಿಯ ಬಗ್ಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಇಂತಹ ಉಲ್ಲಂಘನೆ ಸ್ವೀಕಾರಾರ್ಹವಲ್ಲ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
'ಜನವರಿ 10 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಇಸ್ಲಾಮಾಬಾದ್‌ನಲ್ಲಿರುವ ಬ್ರಿಟಿಷ್ ಹೈಕಮಿಷನರ್, ಯುಕೆ ವಿದೇಶಾಂಗ ಕಚೇರಿಯ ಅಧಿಕಾರಿಯೊಂದಿಗಿನ ಆಕ್ಷೇಪಾರ್ಹ ಭೇಟಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದು ಅದು ಹೇಳಿದೆ. ಈ ಉಲ್ಲಂಘನೆ ಕುರಿತು ವಿದೇಶಾಂಗ ಕಾರ್ಯದರ್ಶಿ ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್‌ಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ ಎಂದು ಎಂಇಎ ಹೇಳಿದೆ.