ಮುಂಬೈ: ಮರಾಠ ಮೀಸಲಾತಿಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮರಾಠ ಪ್ರತಿಭಟನಕಾರರು ಶನಿವಾರ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದಾರೆ.
ಮುಂಬೈ: ಮರಾಠ ಮೀಸಲಾತಿಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮರಾಠ ಪ್ರತಿಭಟನಕಾರರು ಶನಿವಾರ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಮನೋಜ್ ಜಾರಾಂಗೆ ನೇತೃತ್ವದಲ್ಲಿ ಶುಕ್ರವಾರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭವಾಗಿತ್ತು.
ಸಿ.ಎಂ ಏಕನಾಥ್ ಶಿಂಧೆ ಅವರು ಜಾರಾಂಗೆ ಅವರಿಗೆ ಜ್ಯೂಸ್ ನೀಡಿದರು. ಅದನ್ನು ಸ್ವೀಕರಿಸಿದ ಜಾರಾಂಗೆ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ ಎಂದು ಘೋಷಣೆ ಮಾಡಿದರು.
ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭರವಸೆ ನೀಡಿದ್ದರಿಂದ ಸತ್ಯಾಗ್ರಹ ವಾಪಾಸು ಪಡೆಯಲಾಗಿದೆ ಎಂದು ಪ್ರತಿಭಟನೆಯ ಮುಖಂಡರೊಬ್ಬರು ಹೇಳಿದ್ದಾರೆ.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಇದರೊಂದಿಗೆ 14 ವರ್ಷಗಳ ಹೋರಾಟ ಅಂತ್ಯಗೊಂಡಿದೆ.