HEALTH TIPS

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು

              ವದೆಹಲಿ: ಅಯೋಧ್ಯೆ ವಿಮಾನನಿಲ್ದಾಣವನ್ನು 'ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನನಿಲ್ದಾಣ, ಅಯೋಧ್ಯಾಧಾಮ್‌' ಎಂದು ಹೆಸರಿಸುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಸಭೆ ಶುಕ್ರವಾರ ಅಂಗೀಕಾರ ನೀಡಿದೆ.

              ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಈ ವಿಮಾನನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನನಿಲ್ದಾಣವಾಗಿ ಕೂಡ ಘೋಷಿಸಿದೆ.

               ಮೋದಿ ಅವರು ಡಿ. 30ರಂದು ವಿಮಾನನಿಲ್ದಾಣವನ್ನು ಉದ್ಘಾಟಿಸಿದ್ದರು.

                ಅಂತರರಾಷ್ಟ್ರೀಯ ವಿಮಾನನಿಲ್ದಾಣ ಎಂದು ಘೋಷಿಸಿರುವುದರಿಂದ ಈ ಪ್ರದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಅಲ್ಲದೆ ಪ್ರವಾಸಿಗರು ಮತ್ತು ವಿದೇಶಿ ಯಾತ್ರಿಗಳು ಬರುವುದರಿಂದ ಅಯೋಧ್ಯೆಯು ಜಾಗತಿಕ ಮಟ್ಟದ ಯಾತ್ರಾ ಸ್ಥಳವಾಗಿಯೂ ರೂಪುಗೊಳ್ಳಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries