ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ವಿದ್ಯಾಲಯದ ನಿವೃತ್ತ ಮುಖ್ಯೋಪಾಧ್ಯಾಯಿನಿ ದೇವಿರಾಮನ್ ಕುಟ್ಟಿ ಪಾಲ್ಗೊಂಡು ಮಾತನಾಡಿ ಸ್ವಾತಂತ್ರ ಹೋರಾಟಗಾರರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ನಿವೃತ್ತ ಅಧ್ಯಾಪಕಿ ರಜನಿ ಮಾತನಾಡಿ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು. ಶಾಲೆ ಮೇಲ್ವಿಚಾರಕ ಪ್ರಶಾಂತ್ ಬೆಳಿಂಜ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಮಾನಸ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ವಿದ್ಯಾರ್ಥಿ ಚಾರ್ವಿ ಆರ್ ಪಿ ಕಾರ್ಯಕ್ರಮವನ್ನು ನಿರೂಪಿಸಿದಳು. ಅದ್ವಯ್ ರಾಮ್ ವಂದಿಸಿದರು.