ಚೆನ್ನೈ: ಸ್ವಚ್ಛ ಮಂದಿರ ಅಭಿಯಾನದ ಭಾಗವಾಗಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು.
ಚೆನ್ನೈ: ಸ್ವಚ್ಛ ಮಂದಿರ ಅಭಿಯಾನದ ಭಾಗವಾಗಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು.
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಪ್ರಮುಖ ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕರೆ ನೀಡಿದ್ದರು.
ಸ್ವಚ್ಛತೆಯ ನಂತರ ದೇವಸ್ಥಾನಕ್ಕೆ ತೆರಳಿದ ರಾಜ್ಯಪಾಲರು, ರಂಗನಾಥಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ದೆಹಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ವಾಲ್ಮೀಕಿ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಹೈದರಾಬಾದ್‌ನ ಬಶೀರ್ ಬಾಗ್‌ನಲ್ಲಿರುವ ಕನಕ ದುರ್ಗ, ನಾಗಲಕ್ಷ್ಮಿ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಪಾಲ್ಗೊಂಡರು.
.