ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಭಾನುವಾರ) ಗುಜರಾತ್‌ನ ಅಹಮದಾಬಾದ್‌ನ ಜಗನ್ನಾಥ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಕರ ಸಂಕ್ರಾಂತಿಯ ಹಬ್ಬದ ಆಚರಣೆಯ ಭಾಗವಾಗಿ ಜನರೊಂದಿಗೆ ಗಾಳಿಪಟ ಹಾರಿಸಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ತಿಳಿಸಿದ್ದಾರೆ.
ಗುಜರಾತ್‌ನಾದ್ಯಂತ ಸ್ವಚ್ಛತಾ ಅಭಿಯಾನ:
'ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಭಾಗವಾಗಿ ಜನವರಿ 14 ರಿಂದ 22 ರವರೆಗೆ ಗುಜರಾತ್‌ನಾದ್ಯಂತ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ' ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದೇಶದಾದ್ಯಂತ ಎಲ್ಲಾ ದೇವಸ್ಥಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದರು. 'ಅಭಿಯಾನದ ಭಾಗವಾಗಿ ಇಂದು ಗಾಂಧಿನಗರ ಬಳಿಯ ಧೋಳೇಶ್ವರ ಮಹಾದೇವ ದೇವಸ್ಥಾನದ ಆವರಣದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದೆ'ಎಂದು ಪಟೇಲ್ ಹೇಳಿದ್ದಾರೆ.