ನವದೆಹಲಿ: ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ (ಮರಣೋತ್ತರ)ವನ್ನು ಘೋಷಿಸಿ ರಾಷ್ಟ್ರಪತಿ ಆದೇಶಿಸಿದ್ದಾರೆ.
ನವದೆಹಲಿ: ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ (ಮರಣೋತ್ತರ)ವನ್ನು ಘೋಷಿಸಿ ರಾಷ್ಟ್ರಪತಿ ಆದೇಶಿಸಿದ್ದಾರೆ.
ಜನ ನಾಯಕರಾಗಿದ್ದ ಕರ್ಪೂರಿ ಠಾಕೂರ್ ಅವರು ಎರಡು ಬಾರಿ (1970ರಿಂದ 1971 ಮತ್ತು 1977ರಿಂದ 1979ರವರೆಗೆ) ಬಿಹಾರದ ಮುಖ್ಯಮಂತ್ರಿಯಾಗಿದ್ದರು.
1988ರ ಫೆ. 17ರಂದು ಅವರು ನಿಧನರಾದರು. 1924ರ ಜ. 24ರಂದು ಜನಿಸಿದ ಕರ್ಪೂರಿ ಠಾಕೂರ್ ಅವರ ಜನ್ಮಶತಮಾನೋತ್ಸವದ ಒಂದು ದಿನ ಮೊದಲೇ ಈ ಪ್ರಶಸ್ತಿ ಘೋಷಣೆಯಾಗಿದೆ.
ಠಾಕೂರ್ ಅವರ ಪುತ್ರ ರಾಮನಾಥ್ ಠಾಕೂರ್ ಅವರು ಜೆಡಿಯುನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.