HEALTH TIPS

ಭಾರತದ ಅತಿ ಉದ್ದದ ಸಮುದ್ರ ಸೇತುವೆ 'ಅಟಲ್ ಸೇತು' ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

               ನಾಸಿಕ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ₹17,840 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಟಲ್ ಬಿಹಾರಿ ವಾಜಪೇಯಿ ಸೇವಾರಿ - ನವ ಶೇವಾ 'ಅಟಲ್ ಸೇತು' ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಲೋಕಾರ್ಪಣೆಗೊಳಿಸಿದ್ದಾರೆ.


               ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

        ಮೋದಿ ಅವರು 2016ರ ಡಿಸೆಂಬರ್ ತಿಂಗಳಿನಲ್ಲಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ.

              ಅಟಲ್​ ಸೇತು ಸುಮಾರು 21.8 ಕಿಮೀ ಉದ್ದದ ಆರು-ಪಥದ ಸೇತುವೆಯಾಗಿದ್ದು, 16.5 ಕಿಮೀ ಸಮುದ್ರದ ಮೇಲೆ ಹಾಗೂ 5.5 ಕಿಮೀ ಭೂಮಿಯ ಮೇಲೆ ನಿರ್ಮಿಸಲಾಗಿದೆ.

              ಇದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ. ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಪ್ರಯಾಣದ ಸಮಯವನ್ನು ತಗ್ಗಿಸುತ್ತದೆ. ಜತೆಗೆ ಮುಂಬೈ ಬಂದರು ಮತ್ತು ಜವಾಹರಲಾಲ್ ನೆಹರು ಬಂದರು ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ಉದ್ಘಾಟನೆ: ಪ್ರಧಾನಿ ಮೋದಿ ನಾಸಿಕ್‌ನಲ್ಲಿ 27ನೇ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಹಾರಾಷ್ಟ್ರದಲ್ಲಿ ₹30,500 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

            ಬಳಿಕ ಪ್ರಧಾನಿ ಮೋದಿ ನವಿ ಮುಂಬೈನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈಸ್ಟರ್ನ್ ಫ್ರೀವೇ ಆರೆಂಜ್ ಗೇಟ್‌ನಿಂದ ಮರೈನ್ ಡ್ರೈವ್‌ಗೆ ಸಂಪರ್ಕಿಸುವ ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

             ಇದೇ ವೇಳೆ ಸೂರ್ಯ ಪ್ರಾದೇಶಿಕ ಬೃಹತ್ ಕುಡಿಯುವ ನೀರಿನ ಯೋಜನೆಯ ಮೊದಲ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಇದನ್ನು ₹1,975 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಮಹಾರಾಷ್ಟ್ರದ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುತ್ತದೆ. ಸುಮಾರು 14 ಲಕ್ಷ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries