ಕಾಸರಗೋಡು: ನಗರದ ಹೆಣ್ಮಕ್ಕಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. 1974ರಲ್ಲಿ ಸ್ಥಾಪಿತಗೊಂಡಿರುವ ಶಾಲೆಯಲ್ಲಿ ಒಂದು ವರ್ಷ ಕಾಲ ನಡೆಯುವ ಕಾರ್ಯಕ್ರಮದ ಬಗ್ಗೆ ರೂಪುರೇಷೆ ತಯಾರಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ ರಚನಾ ಸಭೆ ಜನವರಿ 30 ರಂದು ಮಧ್ಯಾಹ್ನ 2.30ಕ್ಕೆ ಶಾಲೆಯಲ್ಲಿ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.