ತಿರುವನಂತಪುರಂ: ಆಗ್ನೇಯ ಅರಬ್ಬಿ ಸಮುದ್ರzಲ್ಲಿ ವಾಯಭಾರ ಒತ್ತಡ ಮತ್ತು ಉತ್ತರ ಕೇರಳ ಕರಾವಳಿಯ ಸಮೀಪ ಕುತ ಪ್ರಭಾವದಿಂದ ಮುಂದಿನ ನಾಲ್ಕು ದಿನಗಳ ಕಾಲ ಕೇರಳದಲ್ಲಿ ಸಾಧಾರಣ/ಮಧ್ಯಮ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕೇರಳದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಮತ್ತು ಶುಕ್ರವಾರ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಕೇಂದ್ರ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಗುರುವಾರ ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಶುಕ್ರವಾರ ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗಿನ ಮಳೆಯನ್ನು ಭಾರೀ ಮಳೆ ಎಂದು ವ್ಯಾಖ್ಯಾನಿಸಲಾಗಿದೆ.
ಕೇರಳ ಮತ್ತು ದಕ್ಷಿಣ ತಮಿಳುನಾಡು ಕರಾವಳಿ ತೀರದಲ್ಲಿ ಇಂದು ರಾತ್ರಿ 11.30ರವರೆಗೆ 1.0 ರಿಂದ 1.5 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಹಾಗೂ ಕರಾವಳಿ ವಾಸಿಗಳು ಎಚ್ಚರದಿಂದಿರಬೇಕು ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ತಿಳಿಸಿದೆ.
ಕೇರಳ-ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ನಿಬರ್ಂಧವಿಲ್ಲ ಮತ್ತು ಲಕ್ಷದ್ವೀಪ ಭಾಗದಲ್ಲಿ ಮೀನುಗಾರಿಕೆಗೆ ತೆರಳಬಾರದು ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಲಕ್ಷದ್ವೀಪ ಪ್ರದೇಶದಲ್ಲಿ ಶನಿವಾರದವರೆಗೆ ಗಂಟೆಗೆ 40 ರಿಂದ 45 ಕಿಮೀ ವೇಗದಲ್ಲಿ ಮತ್ತು ಕೆಲವು ಸಂದರ್ಭಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಬಲವಾದ ಗಾಳಿ ಮತ್ತು ಕೆಟ್ಟ ಹವಾಮಾನದ ಎಚ್ಚರಿಕೆ ಇದೆ.