ಚಂಡೀಗಢ: ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಭವರಸೆಗಳನ್ನು ನೆನಪಿಸಲು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪಂಜಾಬ್‌ನಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಿತು.
ಚಂಡೀಗಢ: ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಭವರಸೆಗಳನ್ನು ನೆನಪಿಸಲು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪಂಜಾಬ್‌ನಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಿತು.
ಸಂಗೂರ್, ಜಲಂಧರ್, ಮೊಹಾಲಿ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಿತು.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಲು ನಾವು ಒತ್ತಾಯಿಸುತ್ತೇವೆ. ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಸರ್ಕಾರಿ ನೀಡಿದ್ದ ಭರವಸೆಗಳನ್ನು ನೆನಪಿಸಲು ಈ ರ್‍ಯಾಲಿ ಆಯೋಜಿಸಿದ್ದೇವೆ ಎಂದು ರೈತ ಮುಖಂಡ ಹರಿಂದರ್ ಸಿಂಗ್ ಲಖೋವಾಲ್ ಹೇಳಿದರು.
'ಕೃಷಿ ಸಾಲ ಮನ್ನಾ ಹಾಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎನ್ನುವುದು ನಮ್ಮ ಆಗ್ರಹ. ರೈತರ ಆದಾಯ ದ್ವಿಗುಣ ಮಾಡಬೇಕು ಎಂದು ಸರ್ಕಾರ ಹೇಳಿತ್ತು. ಆದರೆ ಈಗ ಸಾಲ ದುಪ್ಪಟ್ಟಾಗಿದೆ. ನಮ್ಮ ಬೆಳೆಗಳಿಗೆ ಸರಿಯಾದ ಬೆಳೆ ಸಿಗುತ್ತಿಲ್ಲ' ಎಂದು ಲಖೋವಾಲ್ ಹೇಳಿದರು.
ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದೂ ರೈತರು ಆಗ್ರಹಿಸಿದರು.
ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಮೋದಿ: ಕಾನೂನು ರದ್ದುಗೊಳಿಸುವುದು ಹೇಗೆ?