HEALTH TIPS

ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಅಸ್ಸಾಂ ರೈಫಲ್ಸ್ ಯೋಧ

             ಸ್ಸಾಂ: ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನೊಂದಿಗಿದ್ದ ಆರು ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ, ಬಳಿಕ ಮಣಿಪುರದಲ್ಲಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡೇಟಿಗೆ ಒಳಗಾದ ಆರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

              ಈ ಘಟನೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಸಂಬಂಧಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

             ದಕ್ಷಿಣ ಮಣಿಪುರದ ಮ್ಯಾನ್ಮಾರ್ ಗಡಿಯ ಬಳಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್ ಬೆಟಾಲಿಯನ್‌ನಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


                ಮಣಿಪುರದಲ್ಲಿ ಈಗಾಗಲೇ ಗಲಾಟೆ ನಡೆಯುತ್ತಿರುವ ಕಾರಣ ಈ ಘಟನೆಯ ಬಗ್ಗೆ ವದಂತಿ ಹಬ್ಬದಂತೆ ತಡೆಯಲು ಮತ್ತು ಸತ್ಯಾಂಶ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries