ರಾಂಚಿ: ದುಷ್ಕರ್ಮಿಗಳು ದೇವಸ್ಥಾನವೊಂದರ ವಿಗ್ರಹಗಳನ್ನು ಭಗ್ನಗೊಳಿಸಿದ್ದು, ಅದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ರಾಂಚಿ: ದುಷ್ಕರ್ಮಿಗಳು ದೇವಸ್ಥಾನವೊಂದರ ವಿಗ್ರಹಗಳನ್ನು ಭಗ್ನಗೊಳಿಸಿದ್ದು, ಅದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಬರಿಯಾತು ಎಂಬಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ದೇವಸ್ಥಾನದ ಒಳಗಗಿನ ಸುಮಾರು ಮೂರರಿಂದ ನಾಲ್ಕು ವಿಗ್ರಹಗಳನ್ನು ಭಗ್ನಗೊಳಿಸಲಾಗಿದೆ ಎಂದು ಎಂದು ಉಪ ವಿಭಾಗಾಧಿಕಾರಿ ಉತ್ಕರ್ಷ್ ಕುಮಾರ್ ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಸ್ಥಳೀಯರು ಬರಿಯಾತು ಎಂಬಲ್ಲಿ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು ಎಂದು ಅವರು ಮಾಹಿತಿ ನೀಡಿದರು.
'ಕೆಲವೇ ದಿನಗಳಲ್ಲಿ ವಿಗ್ರಹಗಳನ್ನು ಪುನಃ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಪ್ರತಿಭಟನಕಾರರಿಗೆ ಭರವಸೆ ನೀಡಲಾಗಿದೆ. ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ರಸ್ತೆ ನಿರ್ಬಂಧವನ್ನು ತೆರವುಗೊಳಿಸಲಾಯಿತು' ಎಂದು ಕುಮಾರ್ ತಿಳಿಸಿದ್ದಾರೆ.
ಪೊಲೀಸರು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯನ್ನು ಪರಿಶೀಲಿಸಲಾಗುತ್ತಿದೆ ಎಂದರು.