ಢಾಕಾ: ಬಾಂಗ್ಲಾದೇಶದಲ್ಲಿ ಭಾನುವಾರ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಗೆಲುವು ಸಾಧಿಸುವ ನಿರೀಕ್ಷೆಯಿದೆ.ಮತದಾರರ ವಿವರ:

ದೇಶದ ಚುನಾವಣಾ ಆಯೋಗದ ಪ್ರಕಾರ, ನಾಳೆ ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 11.96 ಕೋಟಿ ನೋಂದಾಯಿತ ಮತದಾರರು 42 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತ ಚಲಾಯಿಸಲಿದ್ದಾರೆ.
27 ರಾಜಕೀಯ ಪಕ್ಷಗಳಿಂದ 1,500ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು 436 ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಬಿಗಿ ಭದ್ರತೆಯಲ್ಲಿ ನಡೆಯುತ್ತಿರುವ 12ನೇ ಸಾರ್ವತ್ರಿಕ ಚುನಾವಣೆಯ ಮೇಲ್ವಿಚಾರಣೆಯನ್ನು ಭಾರತದ ಮೂವರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ನೋಡಿಕೊಳ್ಳಲಿದ್ದಾರೆ.
ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜನವರಿ 8ರಂದು ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಭ್ರಷ್ಟಾಚಾರದ ಆರೋಪದಲ್ಲಿ ಗೃಹಬಂಧನದಲ್ಲಿರುವ ಮಾಜಿ ಪ್ರಧಾನಿ ಖಲೀದಾ ಜಿಯಾ (78) ಅವರ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ ಪ್ರಧಾನಿ ಹಸೀನಾ ಸತತ ನಾಲ್ಕನೇ ಬಾರಿ ಗೆಲ್ಲುವ ನಿರೀಕ್ಷೆಯಿದೆ.