ಇಂಫಾಲ್ : ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಮೃತರನ್ನು ಟಿ. ಮನೋರಂಜನ್ ಎಂದು ಗುರುತಿಸಲಾಗಿದೆ.

ಸಮೀಪದ ಗುಡ್ಡಗಾಡು ಪ್ರದೇಶಗಳಿಂದ ಬಂದಿದ್ದ ಶಂಕಿತ ಉಗ್ರರು ಬುಧವಾರ ರಾತ್ರಿ ಕಾಂಗ್‌ಚುಪ್ ಪ್ರದೇಶದ ಮೇಲೆ ದಾಳಿ ನಡೆಸಿದರು.
ಇಂಫಾಲ್‌ನ ಕಣಿವೆ ಮತ್ತು ಗುಡ್ಡಗಾಡು ಪ್ರದೇಶಗಳ ಹಲವು ಸ್ಥಳಗಳಲ್ಲಿ ಬುಧವಾರ ರಾತ್ರಿ ಸರಣಿ ಗುಂಡಿನ ಚಕಮಕಿಗಳು ನಡೆಯುತ್ತಿದ್ದಾಗಲೇ ಇಲ್ಲೂ ದಾಳಿ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಿಳೆಯರಿಂದ ಪ್ರತಿಭಟನೆ:
ಇದರ ಬೆನ್ನಲ್ಲೇ, ಭಾರಿ ಸಂಖ್ಯೆಯಲ್ಲಿ ಮಹಿಳೆಯರಿದ್ದ ಗುಂಪು ಇಂಫಾಲ್‌ನಲ್ಲಿ ರ್‍ಯಾಲಿ ನಡೆಸಿ ಹಿಂಸಾಚಾರವನ್ನು ಖಂಡಿಸಿದೆ. ಅಲ್ಲದೆ ರಾಜ್ಯ ಮತ್ತು ಕೇಂದ್ರ ಪಡೆಗಳ ಏಕೀಕೃತ ಕಮಾಂಡ್‌ನ ಮುಖ್ಯಸ್ಥರಾಗಿರುವ ಕುಲದೀಪ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.
ಕಳೆದ ವರ್ಷದ ಮೇ ತಿಂಗಳಿನಲ್ಲಿ ಈ ಸ್ಥಾನಕ್ಕೆ ಕುಲದೀಪ್ ಸಿಂಗ್ ಅವರನ್ನು ಮಣಿಪುರದ ರಾಜ್ಯಪಾಲರು ನೇಮಿಸಿದ್ದರು.
ಪ್ರತಿಭಟನಕಾರರ ಮೆರವಣಿಗೆಯು ರಾಜಭವನದ ಕಡೆಗೆ ಸಾಗುತ್ತಿದ್ದಾಗ, ಭದ್ರತಾ ಸಿಬ್ಬಂದಿ ಅವರನ್ನು ತಡೆದರು. ಈ ವೇಳೆ ಪ್ರತಿಭಟನಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಆಗ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.