HEALTH TIPS

ಸಂಸತ್‌ ಭದ್ರತಾ ಲೋಪ ಪ್ರಕರಣ: ಬಂಧಿತ ಆರೋಪಿಗಳಿಗೆ ಮತ್ತೊಂದು ಸುತ್ತಿನ ವಿಚಾರಣೆ

              ವದೆಹಲಿ: ಸಂಸತ್‌ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರು ಆರೋಪಿಗಳನ್ನು ದೆಹಲಿ ಪೊಲೀಸರು ಎರಡನೇ ಬಾರಿಗೆ ಮುಖಾಮುಖಿಯಾಗಿ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

               'ಸಾಗರ್ ಶರ್ಮಾ, ಮನೋರಂಜನ್. ಡಿ, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರು ಜನವರಿ 5ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಲಿದ್ದಾರೆ.

ಭದ್ರತಾ ಉಲ್ಲಂಘನೆಯ ಹಿಂದಿನ ನಿಜವಾದ ಉದ್ದೇಶ ತಿಳಿದುಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ' ಎಂದು ಮೂಲಗಳು ತಿಳಿಸಿವೆ.

                'ಪೊಲೀಸ್ ಮೂಲಗಳ ಪ್ರಕಾರ, ನೀಲಂ ಮತ್ತು ಮನೋರಂಜನ್ ಅವರನ್ನು ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಿಶೇಷ ಇಂಟೆಲಿಜೆನ್ಸ್ ಘಟಕದ ಕಚೇರಿಯಲ್ಲಿ ಇರಿಸಲಾಗಿದೆ. ಉಳಿದ ನಾಲ್ವರನ್ನು ವಿವಿಧ ಇಂಟೆಲಿಜೆನ್ಸ್ ಘಟಕದ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ' ಎಂದು ಮಾಹಿತಿ ನೀಡಿದೆ.

              'ದಾಳಿಯ ಹಿಂದಿನ ಉದ್ದೇಶ ತಿಳಿಯಲು ಹಾಗೂ ಅವರು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧವನ್ನು ಹೊಂದಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲು ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ' ಎಂದು ಪೊಲೀಸ್‌ ಮೂಲಗಳು ಹೇಳಿವೆ.

                  ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿತ್ತು. 2023ರ ಡಿಸೆಂಬರ್ 13ರಂದು ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ 'ಸ್ಮೋಕ್ ಕ್ಯಾನ್' (ಹಳದಿ ಬಣ್ಣದ ಹೊಗೆ) ಹಾರಿಸಿ ದಾಂಧಲೆ ಎಬ್ಬಿಸಿದ್ದರು. ಇದೇ ಸಮಯದಲ್ಲಿ ಮತ್ತಿಬ್ಬರು ಸಂಸತ್‌ನ ಹೊರಗಡೆ ಪ್ರತಿಭಟನೆ ನಡೆಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries