ಕೋಯಿಕ್ಕೋಡ್ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ. ಮುರಳೀಧರನ್ ಶುಕ್ರವಾರ ಹೇಳಿದ್ದಾರೆ.
'ಈಗಿನ ವ್ಯವಸ್ಥೆಯನ್ನು ನಾನು ನಂಬುತ್ತೇನೆ. ರಾಹುಲ್ ಗಾಂಧಿ ವಯನಾಡ್ ನಿಂದ ಸ್ಪರ್ಧಿಸಲಿದ್ದಾರೆ.
ಅದರಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಣ್ಣೂರು ಹೊರತುಪಡಿಸಿ ಕೇರಳದ ಎಲ್ಲಾ ಹಾಲಿ ಸಂಸದರು ಅವೇ ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದೂ ಅವರು ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಿಂದಲೇ ಆಯ್ಕೆಯಾಗಿದ್ದರು.