ವಾಷಿಂಗ್ಟನ್: ರಷ್ಯಾದ ದಾಳಿಯನ್ನು ಹಿಮ್ಮೆಟ್ಟಿಸಲು ಉಕ್ರೇನ್‌ಗೆ ನೆರವು ನೀಡಲು ತನ್ನ ಬಳಿ ಹಣವಿಲ್ಲ. ಇದರಿಂದಾಗಿ ಉಕ್ರೇನ್‌ಗೆ ಶಸ್ತ್ರಾಸ್ತ್ರಗಳು ಮತ್ತು ಕ್ಷಿಪಣಿಗಳನ್ನು ರವಾನಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿರುವ ಅಮೆರಿಕದ ರಕ್ಷಣಾ ಇಲಾಖೆ (ಪೆಂಟಗನ್) ಉಕ್ರೇನ್‌ಗೆ ನೆರವು ಕಲ್ಪಿಸುವ ನಿಟ್ಟಿನಲ್ಲಿ 50 ರಾಷ್ಟ್ರಗಳ ಮಾಸಿಕ ಸಭೆ ಕರೆಯಲಾಗುವುದು ಎಂದು ತಿಳಿಸಿದೆ.
ಈ ಮೂಲಕ ಉಕ್ರೇನ್ ನೆರವಿಗಾಗಿ 2022ರ ಏಪ್ರಿಲ್‌ನಲ್ಲಿ ರಚಿಸಲಾಗಿದ್ದ ಅಂತರರಾಷ್ಟ್ರೀಯ ಗುಂಪಿನ ಮೊದಲ ಸಭೆ ಮಂಗಳವಾರ ನಡೆಯಲಿದೆ. ಈ ಸಭೆಯಲ್ಲಿ ದೀರ್ಘಕಾಲೀನ ಅವಶ್ಯಕತೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಪೆಂಟಗನ್‌ನ ಮಾಧ್ಯಮದ ಉಪ ಕಾರ್ಯದರ್ಶಿ ಸಬ್ರಿನಾ ಸಿಂಗ್ ತಿಳಿಸಿದ್ದಾರೆ.
ನ್ಯಾಟೊ ಪ್ರಧಾನ ಕಾರ್ಯದರ್ಶಿ ಜೆನ್ಸ್ ಸ್ಟಾಲ್‌ಟೆನ್‌ಬರ್ಗ್ ಅವರು, ಸುಮಾರು ₹ 10 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಜಂಟಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಘೋಷಿಸಿದ್ದಾರೆ.