ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆಯಷ್ಟೇ (ಸೋಮವಾರ) ಪ್ರತಿಷ್ಠಾಪನೆಗೊಂಡ ಬಾಲರಾಮನನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಕಾರಣ ನೂಕುನುಗ್ಗಲಿನ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ, ಅಯೋಧ್ಯೆಗೆ ಭೇಟಿ ನೀಡದಂತೆ ಬಾರಾಬಂಕಿ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.

ಇಂದಿನಿಂದ (ಮಂಗಳವಾರ) ಸಾರ್ವಜನಿಕ ದರ್ಶನಕ್ಕೆ ರಾಮಮಂದಿರ ಮುಕ್ತಗೊಂಡಿದೆ.
ಲಖನೌನಿಂದ ಸುಮಾರು 30 ಕಿ. ಮೀ ದೂರದಲ್ಲಿರುವ ಬಾರಾಬಂಕಿಯಿಂದ ಅಯೋಧ್ಯೆ ಕಡೆಗಿನ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಮತ್ತು ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿರುವ ಭಕ್ತರನ್ನು ಸಹ ಪ್ರಯಾಣ ನಿಲ್ಲಿಸುವಂತೆ ವಿನಂತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿರುವ ಕಾರಣ ನೂಕುನುಗ್ಗಲಿನ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಜನರು ಇಂದು ಅಲ್ಲಿಗೆ ಭೇಟಿ ನೀಡದಂತೆ ವಿನಂತಿಸಲಾಗಿದೆ ಎಂದು ಬಾರಾಬಂಕಿ ಪೊಲೀಸರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ತಿಳಿಸಿದ್ದಾರೆ.
ಭಕ್ತರಿಗೆ ಬಾಲರಾಮನ ದರ್ಶನಕ್ಕಾಗಿ ಎರಡು ಸಮಯವನ್ನು ನಿಗದಿಗೊಳಿಸಲಾಗಿದೆ. ಮೊದಲ ಅವಧಿಯು ಬೆಳಿಗ್ಗೆ 7 ರಿಂದ 11.30ರವರೆಗೆ ಮತ್ತು ಎರಡನೇ ಅವಧಿಯು ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿಗದಿಪಡಿಸಲಾಗಿದೆ.