ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ಇಂದು (ಸೋಮವಾರ) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ.
ಬಾಲಿವುಡ್ ನಿರ್ದೇಶಕರಾದ ರೋಹಿತ್ ಶೆಟ್ಟಿ ಮತ್ತು ರಾಜಕುಮಾರ್ ಹಿರಾನಿ, ನಟಿ ಮಾಧುರಿ ದೀಕ್ಷಿತ್, ಕಂಗನಾ ರನೌತ್, ರಣಬೀರ್ ಕಪೂರ್ -ಆಲಿಯಾ ಭಟ್, ವಿಕ್ಕಿ ಕೌಶಲ್ -ಕತ್ರಿನಾ ಕೈಫ್ ಮತ್ತು ಆಯುಷ್ಮಾನ್ ಖುರಾನಾ ಅವರು ಅಯೋಧ್ಯೆಯ ರಾಮಮಂದಿರದ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಇತರೆ ಕ್ರೀಡಾ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.
ಖ್ಯಾತ ಬಾಣಸಿಗ ಸಂಜೀವ್ ಕಪೂರ್, ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ರವಿಶಂಕರ್ ಗುರೂಜಿ, ಸ್ವಾಮಿ ಅವಧೇಶಾನಂದ ಗಿರಿ, ಯೋಗ ಗುರು ಸ್ವಾಮಿ ರಾಮ್‌ದೇವ್, ಹಿಂದಿ ಕವಿ ಕುಮಾರ್ ವಿಶ್ವಾಸ್ ಅವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.