ನವದೆಹಲಿ: ಅಮೆರಿಕ-ಕೆನಡಾ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದಲ್ಲಿ ಅನಿವಾಸಿ ಭಾರತೀಯರು 'ಜೈ ಶ್ರೀರಾಮ್' ಎಂದು ಘೋಷಣೆಗಳನ್ನು ಕೂಗುವ ಮೂಲಕ ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ನವದೆಹಲಿ: ಅಮೆರಿಕ-ಕೆನಡಾ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದಲ್ಲಿ ಅನಿವಾಸಿ ಭಾರತೀಯರು 'ಜೈ ಶ್ರೀರಾಮ್' ಎಂದು ಘೋಷಣೆಗಳನ್ನು ಕೂಗುವ ಮೂಲಕ ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ಮಿನ್ನೇಸೋಟನ ಎಚ್‌ಎಸ್‌ಎಂಎನ್ ಪಾರ್ಕಿಂಗ್ ಲಾಟ್‌ನಲ್ಲಿ 75 ಕ್ಕೂ ಹೆಚ್ಚು ಟೆಸ್ಲಾ ಕಾರುಗಳಿಗೆ ದೀಪಾಲಂಕಾರ ಮಾಡಲಾಗಿದೆ.
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಸೋಮವಾರ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನಡೆಯಿತು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್,ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.