ಬದಿಯಡ್ಕ: ಕುಂಬ್ಡಾಜೆ ಉಪ್ಪಂಗಳ ಕಜಮಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೊತ್ಸವದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರಿಗೆ ನೀಡಿ ಆಶೀರ್ವಾದವನ್ನು ಪಡೆಯಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ವೇಣುಗೋಪಾಲ ಕಳೆಯತ್ತೋಡಿ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಧರ ಭಟ್ ಚೋಕೆಮೂಲೆ, ವಿನಯ ಐಲುಕುಂಜೆ, ಹರ್ಷ ಕಜಮಲೆ ಜೊತೆಗಿದ್ದರು.