ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ. 2022ರ ಜ.1 ರಿಂದ ಡಿ.31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಕೃತಿಗಳ ತಲಾ 4 ಪ್ರತಿಗಳನ್ನು ಫೆ. 20ರೊಳಗೆ ತಲುಪಿಸಬೇಕು.

ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿ ಬಹುಮಾನಕ್ಕೆ ಪಾತ್ರವಾಗಲಿದೆ.
ಮರುಮುದ್ರಣವಾದ ಕೃತಿಗಳು, ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಪರಿಗಣಿಸುವುದಿಲ್ಲ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ತಿಳಿಸಿದ್ದಾರೆ.