ಪೆರ್ಲ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠಾ ಮಹೋತ್ಸವ ನಡೆಯುವ ಜ. 22ರಂದು ಪೆರ್ಲ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಬಲಿವಾಡು ಕೂಟದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿರುವುದು. ಬೆಳ್ಗೆ 10ರಿಂದ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಭಜನಾಮಂಡಳಿಯಿಂದ ಭಜನಾಸಂಕೀರ್ತನೆ, ಸಾಮೂಹಿಕ ಶ್ರೀರಾಮತಾರಕ ಜಪ ನಡೆಯುವುದು.
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠಾ ಮಹೋತ್ಸವದ ಅಮಗವಾಗಿ ಎಣ್ಮಕಜೆ ಪಂಚಾಯಿತಿ ವ್ಯಾಪ್ತಿಯ 17ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಜ. 22ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.