ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ 48ದಿವಸಗಳ ಕಾಲ ನಡೆಯಲಿರುವ ಮಂಡಲ ಸಂಕೀರ್ತನೋತ್ಸವ ಆರಂಭಗೊಮಡಿತು. ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿ ಕಾಸರಗೋಡು, ಮಧೂರು ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಮಧೂರು ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರ ನೇತ್ರತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಮಾಣಿಲಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಘೋಷಯಾತ್ರೆಗೆ ಚಲನೆ ನೀಡಿದರು. ಚಿನ್ಮಯಾ ಮಿಷನ್ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತೀ ಅನುಗ್ರಹ ಭಾಷಣ ಮಾಡಿದರು. ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾಯ್ದರ್ಶಿ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣುಆಸ್ರ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಮಧೂರು ದೇವಸ್ಥಾನದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ, ದೇವಸ್ಥಾನದ ಪವಿತ್ರಪಾಣಿ ರತನ್‍ಕುಮಾರ್ ಕಾಮಡ ದಿವ್ಯ ಉಪಸ್ಥಿತರಿದ್ದರು.
ಮಧೂರು ದೇವಸ್ಥಾನ ನವೀಕರಣ ಸಮಿತಿ ಉಪಾಧ್ಯಕ್ಷ ಡಾ. ಬಿ.ಎಸ್. ರಾವ್, ಕಾರ್ಯದರ್ಶಿ ಮಂಜುನಾಥ ಕಾಮತ್, ಮಧೂರು ಗ್ರಾಪಂ ಅಧ್ಯಕ್ಷ ಕೆ. ಗೋಪಾಲಕೃಷ್ಣ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಟಿ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಪ್ಪಯ ನಾಯ್ಕ್ ಸ್ವಾಗತಿಸಿದರು. ರಾಜೇಶ್ ಟಿ. ವಂದಿಸಿದರು.