ಕಾಸರಗೋಡು: ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ 2024-25ನೇ ಸಾಲಿನ ವಾರ್ಷಿಕ ಯೋಜನೆ ರೂಪಿಸುವ ಚಟುವಟಿಕೆಗಳ ಪ್ರಗತಿ ಪರಿಶೀಲನೆಯ ಜಿಲ್ಲಾ ಯೋಜನಾ ಸಮಿತಿಯ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ವಾರ್ಷಿಕ ಯೋಜನೆಯಲ್ಲಿ ಜಿಲ್ಲೆ-ಬ್ಲಾಕ್-ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಜಂಟಿ ಯೋಜನೆಗಳ ಕುರಿತು ಚರ್ಚಿಸಲಾಯಿತು. ಪ್ರಸಕ್ತ ಸಾಲಿನ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯಲ್ಲಿ ತ್ಯಾಜ್ಯ ಸಂಸ್ಕರಣೆಗೆ ಡಬಲ್ ಚೇಂಬರ್ ಇನ್ಸಿನರೇಟರ್ ಅಳವಡಿಕೆಗೆ ನಿವೇಶನ ಕಂಡುಕೊಳ್ಳಲಾಗುವುದು.
ಹಿಂದಿನ ಜಿಲ್ಲಾ ಯೋಜನಾ ಸಮಿತಿ ಸಭೆಯಂತೆ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಮುಂದಿನ ಕ್ರಮದ ವರದಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರು. ಜಿಲ್ಲೆಯಲ್ಲಿ ಈಗಿರುವ ಜಾರಿ ಅಧಿಕಾರಿಗಳ ಹುದ್ದೆ ಖಾಲಿ ಇರುವ ಕುರಿತು ಸರಕಾರಕ್ಕೆ ತಿಳಿಸಲಾಗಿದೆ ಎಂದು ಜಿಲ್ಲಾ ಯೋಜನಾಧಿಕಾರಿ ಮಾಹಿತಿ ನೀಡಿದರು. ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್ ಮತ್ತು ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಸ್ತುತ ಜಿಲ್ಲೆಯಲ್ಲಿ ಏಳು ಹಾಗೂ ಎರಡು ಪಂಚಾಯಿತಿಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸಹಾಯಕ ಅಭಿಯಂತರರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಚರ್ಚೆ ನಡೆದಿವೆ. ಕಾರ್ಯಪಾಲಕ ಎಂಜಿನಿಯರ್ (ಎಲ್ ಐಡಿಇಡಬ್ಲ್ಯು), ಸಹ ಎಂಜಿನಿಯರ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಬೇರೆ ಪಂಚಾಯಿತಿಯಲ್ಲಿರುವವರಿಗೆ ಖಾಲಿ ಇರುವ ಪಂಚಾಯಿತಿಗಳಲ್ಲಿ ಹೆಚ್ಚುವರಿ ಕರ್ತವ್ಯ ನೀಡಲಾಗಿದೆ ಎಂದರು. ವಸತಿ ಯೋಜನೆ ಅನುμÁ್ಠನಕ್ಕೆ ಆಸ್ತಿ ಖರೀದಿ ವೆಚ್ಚವನ್ನು 1.5 ಲಕ್ಷ ರೂ.ಗೆ ಇಳಿಸಿರುವುದನ್ನು ಸರಕಾರದ ಗಮನಕ್ಕೆ ತರಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ಯೋಜನಾ ಸಮಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಜ್ ಪಾದೂರು, ಜಿಲ್ಲಾ ಯೋಜನಾಧಿಕಾರಿ ಟಿ.ರಾಜೇಶ್, ಜಿಲ್ಲಾ ಯೋಜನಾ ಸಮಿತಿ ಸದಸ್ಯರಾದ ನ್ಯಾಯವಾದಿ.ಎಸ್.ಎನ್.ಸರಿತಾ, ಕೆ.ಶಕುಂತಲಾ, ಸಿ.ಜೆ.ಸಜಿತ್, ಜಾಸ್ಮಿನ್ ಕಬೀರ್, ನಜ್ಮಾ ರಫಿ, ಯೋಜನಾ ಸಮಿತಿ ಸÀರ್ಕಾರ ನಾಮನಿರ್ದೇಶಿತ ನ್ಯಾಯವಾದಿ . ರಾಮಚಂದ್ರನ್, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.