HEALTH TIPS

ಸಿದ್ಧತೆ ಪರಿಶೀಲಿಸಲು ಚು. ಆಯೋಗದಿಂದ ರಾಜ್ಯಗಳ ಪ್ರವಾಸ

              ವದೆಹಲಿ: ಲೋಕಸಭಾ ಚುನಾವಣೆಗೆ ರಾಜ್ಯಗಳಲ್ಲಿ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಚುನಾವಣಾ ಆಯೋಗವು ಮುಂದಿನ ವಾರ ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಭೇಟಿ ನೀಡಲಿದೆ.

            ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ ನೇತೃತ್ವದಲ್ಲಿ, ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ ಹಾಗೂ ಅರುಣ್‌ ಗೋಯಲ್ ಅವರಿರುವ ನಿಯೋಗವು ಜನವರಿ 7 ರಿಂದ 10ರ ನಡುವೆ ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಭೇಟಿ ನೀಡಲಿದೆ.

            ನಿಯೋಗದ ಭೇಟಿಗೂ ಮುನ್ನ ಜನವರಿ 6ರಂದು ಉಪ ಚುನಾವಣಾ ಆಯುಕ್ತರು, ಚುನಾವಣೆ ಸಿದ್ದತೆ ಬಗ್ಗೆ ಅವರಿಗೆ ಮಾಹಿತಿ ನೀಡಲಿದ್ದಾರೆ.

              ಈಗಾಗಲೇ ಉಪ ಚುನಾವಣಾ ಆಯುಕ್ತರು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

                  ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯಗಳಿಗೆ ಪ್ರವಾಸ ಮಾಡಿ, ರಾಜಕೀಯ ಪಕ್ಷಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡುವುದು ಚುನಾವಣಾ ಆಯೋಗದ ಸಾಮಾನ್ಯ ಪ್ರಕ್ರಿಯೆ.

                ಆದರೆ ಎಲ್ಲಾ ರಾಜ್ಯಗಳಿಗೆ ಆಯೋಗವು ಭೇಟಿ ನೀಡುವುದು ಅನುಮಾನ ಎನ್ನಲಾಗಿದ್ದು, ಇತ್ತೀಚೆಗೆ ವಿಧಾನಸಭೆ ಚುನಾವಣೆ ನಡೆದಿದ್ದ ರಾಜ್ಯಗಳಿಗೆ ಭೇಟಿ ನೀಡುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries