ಕಾಸರಗೋಡು: ಅಯೋಧ್ಯೆಯಲ್ಲಿ ನಡೆದ ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠೆ ಅಂಗವಾಗಿ ಕೋಟೆಕಣಿ ಶ್ರಿ ರಾಮನಾಥ ದೇವಸ್ಥಾನದಲ್ಲಿ ಮಹಾಗಣಪತಿ ಹವನ, ಸಾಮೂಹುಕ ಶ್ರೀ ರಾಮನಾಮತಾರಕ ಮಂತ್ರ ಪಠಣ ಕಾರ್ಯಕ್ರಮ ಜರುಗಿತು.
ಶ್ರೀರಾಮ ದೇವರಿಗೆ ವಿಶೇಷ ಪೂಜೆ ನೆರವೇರಿತು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣುಆಸ್ರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಅಯೋಧ್ಯೆಯಲ್ಲಿ ಕರಸೇವೆಯಲ್ಲಿ ಭಾಗವಹಿಸಿದ್ದ ಕರಸೇವಕರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.